ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನದ ಸಂಭ್ರಮ, ಕುಂದಾನಗರಿ ಸಂಪೂರ್ಣ ಸಜ್ಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶತಮಾನ ಹಿಂದೆ ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನವನ್ನು ಸ್ಮರಣಿಯಗೊಳಿಸಲು ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ಸಜ್ಜಾಗಿದೆ.

1924ರ ಡಿಸೆಂಬರ್ 26 ಹಾಗೂ 27ರಂದು ಮಹಾತ್ಮ ಗಾಂಧೀಜಿ ಬೆಳಗಾವಿ ಭೇಟಿ ನೀಡಿ, ಕಾಂಗ್ರೆಸ್ ಅಧಿವೇಶದಲ್ಲಿ ಭಾಗಿಯಾಗಿದ್ದರು. ಈ ಅಧಿವೇಶನಕ್ಕೆ 100 ವರ್ಷಗಳಾದ ಹಿನ್ನಲೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹಾ ಸಮಾವೇಶ ನಡೆಯಲಿದೆ. ಇದಕ್ಕೆ ಸತ್ಯಾಗ್ರಹ ಬೈಠಕ್ ಎಂದು ಕಾಂಗ್ರೆಸ್ ನಾಮಕರಣ ಮಾಡಿದೆ. ಮೈಸೂರು ದಸರಾದಂತೆ ಗಡಿ ಜಿಲ್ಲೆ ಕಂಗೊಳಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರು ಹಾಗೂ ಘಟಾನುಘಟಿ ನಾಯಕರು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಂಡರೆ 10:45ಕ್ಕೆ ಖಾದಿ ಉತ್ಸವ ಹಾಗೂ ಮಳಿಗೆಗಳ ಉದ್ಘಾಟನೆಯಾಗಲಿದೆ. ಮಧ್ಯಾಹ್ನ 12:30ಕ್ಕೆ ದೆಹಲಿಯಿಂದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು, ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!