April 10, 2026
Friday, April 10, 2026
spot_img

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮತ್ತೊಮ್ಮೆ ಬದ್ಧವೈರಿಗಳ ಕದನಕ್ಕೆ ಅಣಿಯಾಗಿದೆ. ಇಂದು ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಶಾಂತಿಯುತವಾಗಿ ನಡೆಯಿತು.

ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ನಡೆದಿರುವ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಸವದಿ ಮತ್ತು ಕತ್ತಿ ಟೀಂ ಜೊತೆಗೆ ತೀವ್ರ ಕಾದಾಟಕ್ಕೆ ಸಾಕ್ಷಿಯಾಯಿತು. ಜಾರಕಿಹೊಳಿ ಸಹೋದರರು ಒಂದು ಬಣವಾದರೇ, ಸಂಸದ ರಮೇಶ್ ಕತ್ತಿ ಹಾಗೂ ಶಾಸಕ ಲಕ್ಷ್ಮಣ ಸವದಿ ಜಾರಕಿಹೊಳಿ ಬ್ರದರ್ಸಗೆ ತೊಡೆ ತಟ್ಟಿದ್ದಾರೆ. 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೆ 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣ ಗೆಲುವು ಸಾಧಿಸಿ ಸಂಭ್ರಮಾಚರಣೆ ನಡೆಸಿದರು.

ಇದೀಗ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಹೀಗಿದೆ ರಾಮದುರ್ಗ ತಾಲೂಕಿನ ಫಲಿತಾಂಶ

ಮಲಣ್ಣಾ ಯಾದವಾಡ – 19 ಮತಗಳು
ಶ್ರೀಕಾಂತ್ ಧವನ – 16 ಮತಗಳು
ಮಲ್ಲಣ್ಣಾ ಯಾದವಾಡ 3 ಮತಗಳಿಂದ ಗೆಲುವು

ಹೀಗಿದೆ ಅಥಣಿ ತಾಲೂಕಿನ ಫಲಿತಾಂಶ

ಲಕ್ಷ್ಮಣ ಸವದಿ- 122 ಮತಗಳು
ಮಹೇಶ್ ಕುಮಟಳ್ಳಿ – 3 ಮತಗಳು
ಲಕ್ಷ್ಮಣ ಸವದಿ 119 ಮತಗಳಿಂದ ಗೆಲುವು

ಹೀಗಿದೆ ರಾಯಭಾಗ ತಾಲೂಕಿನ ಫಲಿತಾಂಶ

ಅಪ್ಪಾಸಾಹೇಬ್ ಕುಲಗೋಡೆ – 120 ಮತಗಳು
ಬಸನಗೌಡ ಆಸಂಗಿ – 64 ಮತಗಳು
ಅಪ್ಪಾಸಾಹೇಬ್ ಕುಲಗೋಡೆ 56 ಮತಗಳಿಂದ ಗೆಲುವು

7 ಕ್ಷೇತ್ರಗಳ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಥಣಿ, ರಾಯಭಾಗ, ರಾಮದುರ್ಗ ಕ್ಷೇತ್ರದ ಫಲಿತಾಂಶ ಮಾತ್ರವೇ ಘೋಷಿಸಲಾಗಿದೆ. ಉಳಿದ ನಿಪ್ಪಾಣಿ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು ಕ್ಷೇತ್ರಗಳ 4ರ ಫಲಿತಾಂಶವನ್ನು ಕೋರ್ಟ್ ಆದೇಶ ಹಿನ್ನಲೆಯಲ್ಲಿ ತಡೆಹಿಡಿಯಲಾಗಿದೆ. ನ್ಯಾಯಾಲಯದ ಆದೇಶದ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !