ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಮತ ಏಣಿಕೆಯ ಹಿನ್ನೆಲೆಯಲ್ಲಿ ಎಲ್ಲಾ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗಿದೆ.ಮೊದಲು ಅಂಚೆ ಮತದಾನ ಏಣಿಕೆ ಮಾಡುತ್ತಾರೆ.
ಜಿಲ್ಲಾ ಚುನಾವಣಾ ಅಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ಸೋಮವಾರ ಬಿ.ಕೆ.ಮಾಡೇಲ್ ಹೈಸ್ಕೂಲ್ ನಲ್ಲಿ ಸ್ಟ್ರಾಂಗ್ ರೂಮ್ ಓಪನ್ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಈಗಾಗಲೇ ಮೊದಲ ಮತ ಏಣಿಕೆ ಕಾರ್ಯ ಆರಂಭವಾಗಿದೆ. ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಆದಷ್ಟು ಬೇಗ ಫಲಿತಾಂಶ ಹೊರ ಬರುತ್ತದೆ ಎಂದರು.
ಮತ ಏಣಿಕೆಯ ಸುತ್ತ ಸಂಭ್ರಮಾಚರಣೆ, ಮೆರವಣಿಗೆಗೆ ಅವಕಾಶ ಇಲ್ಲ. ಹಾಗೇನಾದರೂ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದರು.