July 18, 2026
Saturday, July 18, 2026
spot_img

ಡ್ರಗ್ಸ್ ದಂಧೆಗೆ ಬೆಳಗಾವಿ ಪೊಲೀಸರ ಬ್ರೇಕ್: 10 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ನಿಷ್ಕ್ರಿಯ!

ಹೊಸದಿಗಂತ ಬೆಳಗಾವಿ:

ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಪ್ತಿ ಮಾಡಲಾಗಿದ್ದ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು (NDPS) ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಸಮಿತಿಯ ವತಿಯಿಂದ ಕಾನೂನುಬದ್ಧವಾಗಿ ನಾಶಪಡಿಸಲಾಗಿದೆ. ಒಟ್ಟು 23 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು 22 ಕೆಜಿ 500 ಗ್ರಾಂ ತೂಕದ ಡ್ರಗ್ಸ್ ಅನ್ನು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಲಾಗಿದೆ.

₹10.41 ಲಕ್ಷ ಮೌಲ್ಯದ ಡ್ರಗ್ಸ್ ವಿಲೇವಾರಿ

ಜಿಲ್ಲೆಯ 14 ಪ್ರಮುಖ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ, ಅಂದಾಜು ₹10,41,500 ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ನ್ಯಾಯಾಲಯ ಹಾಗೂ ಸಂಬಂಧಿತ ಉನ್ನತ ಅಧಿಕಾರಿಗಳಿಂದ ಅಧಿಕೃತ ಅನುಮತಿ ಪಡೆದ ನಂತರವೇ ಈ ಮಾದಕ ದ್ರವ್ಯಗಳ ಸಂಪೂರ್ಣ ವಿಲೇವಾರಿ ಪ್ರಕ್ರಿಯೆ ನಡೆಸಲಾಗಿದೆ.

ಪರಿಸರ ನಿಯಮಗಳನ್ವಯ ನಿಷ್ಕ್ರಿಯ

ಜೂನ್ 25ರಂದು ಸಂಜೆ 4.30ರ ಸುಮಾರಿಗೆ ಸವದತ್ತಿ ತಾಲ್ಲೂಕಿನ ಮುರುಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಹಾರುಗೊಪ್ಪ ಗ್ರಾಮದಲ್ಲಿರುವ ‘ದಿ ಬೆಳಗಾಂ ಗ್ರೀನ್ ಎನ್ವಿರಾನ್‌ಮೆಂಟ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮಾದಕ ವಸ್ತುಗಳನ್ನು ತಯಾರಿಸುತ್ತಿದ್ದ ವೇಳೆ ದಾಳಿ ನಡೆಸಿ, ಪರಿಸರ ಮಾಲಿನ್ಯವಾಗದಂತೆ ನಿಯಮಾನುಸಾರ ಅವುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಡ್ರಗ್ಸ್ ದಂಧೆಕೋರರಿಗೆ ಖಡಕ್ ವಾರ್ನಿಂಗ್

ಅಕ್ರಮವಾಗಿ ಮಾದಕ ವಸ್ತುಗಳ ವ್ಯವಹಾರ ನಡೆಸುವವರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಸಿಂಗಂ ಅವತಾರ ತಳೆದಿದ್ದು, ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಿದೆ. ಈ ವಿಶೇಷ ಕಾರ್ಯಾಚರಣೆಯ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು (SP), ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !