ಬೆಳಗಾವಿ: 3,972 ಕೋಟಿ ರೂ. ವೆಚ್ಚದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ

ಹೊಸದಿಗಂತ ವರದಿ, ಬೆಳಗಾವಿ:

3,972 ಕೋಟಿ ರೂ.ಗಳ ವೆಚ್ಚದ 238 ಕಿ.ಮೀ. ಉದ್ದದ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಸೋಮವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹೊಸ ಯೋಜನೆಗಳಿಗೆ ಕೇಂದ್ರ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ ಸೇರಿದಂತೆ ಸಂಸದರು, ಶಾಸಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!