ಬೆಳಗಾವಿ ಚಳಿಗಾಲ ಅಧಿವೇಶನ: ಪ್ರತಿಭಟನೆಗೆ ಸಜ್ಜಾದ ಅನ್ನದಾತ, ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳೆಗಾವಿಯಲ್ಲಿ ನಡೆಯುವ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ರೈತರು ಸಜ್ಜಾಗಿದ್ದು, ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಸಂಸ್ಥಾಪಕ ಅಧ್ಯಕ್ಷ ಪಚ್ಚೆ ನಂಜುಡಸ್ವಾಮಿ ಹೇಳಿದರು.

ರೈತರನ್ನುದ್ದೇಶಿಸಿ ಮಾತನಾಡಿದ ಅವರು, ರೈತರಿಗೆ ಆಗುತ್ತಿರುವ ಅನ್ಯಾಯ, ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡ್ಯದಿಂದ 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

1980ರ ದಶಕದಲ್ಲಿ ಕಂಪನ ಉಂಟುಮಾಡಿದ್ದ ಕರ್ನಾಟಕ ರಾಜ್ಯ ರೈತ ಸಂಘ ಇತ್ತೀಚಿನ ವರ್ಷಗಳಲ್ಲಿ ತಾತ್ವಿಕ ಭಿನ್ನಾಪ್ರಾಯದಿಂದ ಹಲವು ಬಣಗಳಾಗಿದ್ದು, ಸಂಘಟನೆಯ ಬಲ ಕುಸಿದಿದೆ. ರೈತ ಸಂಘದ ಏಕೀಕರಣದ ಮೂಲಕ ಎಲ್ಲಾ ಬಣಗಳನ್ನು ಒಂದೇ ವೇದಿಕೆಯಲ್ಲಿ ಕರೆತಂದು ಸಂಘಟಿಸಲಾಗುವುದು. ಇದು ಮಹತ್ತರ ಬೆಳವಣಿಗೆಯಾಗಲಿದೆ ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!