ಬೆಳಗಾವಿ ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ ಚೆಕ್ ಹಸ್ತಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪರಿಹಾರದ ಚೆಕ್ ವಿತರಿಸಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ, ಸಂತ್ರಸ್ತ ಮಹಿಳೆಯ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಚೆಕ್ ವಿತರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಸಂತ್ರಸ್ತೆ ಕುಟುಬಕ್ಕೆ 5 ಲಕ್ಷ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದರು. ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ. ಸಿಐಡಿ ತನಿಖೆಗೂ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!