ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ (BJP) ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.
ಬಿಜೆಪಿ ಸತ್ಯ ಶೋಧನಾ ತಂಡದಲ್ಲಿ ಸಂಸದರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಇದ್ದಾರೆ. ಸದ್ಯ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಬಳಿಕ ಘಟನಾ ಸ್ಥಳ ವಂಟಮೂರಿ ಹಾಗೂ ಕಾಕತಿ ಪೊಲೀಸ್ ಠಾಣೆಗೆ ಭೇಟಿ ನೀಡಲಿದೆ.