ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಎನ್ಎಚ್ಆರ್ ಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.
ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ ಬಗ್ಗೆ ಮಾಹಿತಿ ನೀಡಿ. ಇಂತಹ ಘಟನೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.
ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಕರಣ ಸಂಬಂಧ 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದ್ದಾರೆ.