ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಗರ್ಭವತಿಯನ್ನಾಗಿಸಿದ ಯುವಕ ಈಗ ಜೈಲಿಗೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸ ದಿಗಂತ ವರದಿ, ಕೃಷ್ಣರಾಜಪೇಟೆ:

ಎದುರು ಮನೆಯ ಯುವಕ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ಬಳಿಕ ಗರ್ಭವತಿ ಮಾಡಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿ ಚನ್ನಾಪುರ ಗ್ರಾಮದಲ್ಲಿ ಜರುಗಿದೆ.
ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿ ಚನ್ನಾಪುರ ಗ್ರಾಮದ ನಿವಾಸಿ ಲಕ್ಷ್ಮಣ ಎಂಬಾತನೇ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಯುವಕ ಲಕ್ಷ್ಮಣ(24) ಆಟೋಚಾಲಕನಾಗಿದ್ದು ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದು, ಈ ವೇಳೆ ಎದುರು ಮನೆಯ ಬಾಲಕಿಯನ್ನು ಪ್ರೀತಿಸುವಂತೆ ನಿವೇದಿಸಿಕೊಂಡು ಹಲವು ದಿನಗಳ ಬಳಿಕ ಬಾಲಕಿ ಪ್ರೀತಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾಳೆ. ಇದಾದ ಬಳಿಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ನಿರಂತರ ಲೈಂಗಿಕ ಸಂಪರ್ಕ ಸಾಧಿಸಿದ್ದಾನೆ. ನಂತರ ಮನೆಯವರಿಗೆ “ಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಕೆಲವು ತಿಂಗಳ ಬಳಿಕ ಬಾಲಕಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಬಾಲಕಿಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಬಾಲಕಿಗೆ ಸ್ಕ್ಯಾನಿಂಗ್ ಮಾಡಿದ್ದಾರೆ. ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿರುತ್ತಾರೆ.
ಇತ್ತ ಬಾಲಕಿಯನ್ನು ಪೋಷಕರು ಕೇಳಿದಾಗ ಲಕ್ಷ್ಮಣ ಎಂಬುವನ ಜೊತೆ ಲೈಂಗಿಕ ಸಂಪರ್ಕ ಹೊಂದಿರುವುದಾಗಿ ಸತ್ಯ ಬಾಯಿ ಬಿಟ್ಟಿದ್ದಾಳೆ. ನಂತರ ಪೋಷಕರು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿರುವ ಪೋಲಿಸರು ಪ್ರಕರಣ ದಾಖಲಿಸಿ ನ್ಯಾಯ್ಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ.ಕೆ.ದೀಪಕ್ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss