ಬೆಳ್ಳಾರೆ: ತಲವಾರು ದಾಳಿಗೊಳಗಾದ ಬಿಜೆಪಿ ಯುವ ಮುಖಂಡ ಆಸ್ಪತ್ರೆಯಲ್ಲಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪರಿಸರದಲ್ಲಿ ದುಷ್ಕರ್ಮಿಗಳ ತಲವಾರು ದಾಳಿಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರವೀಣ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರಾಜಕೀಯವಾಗಿ, ಸಾಮಾಜಿಕವಾಗಿ ಸಕ್ರೀಯರಾಗಿದ್ದ ಪ್ರವೀಣ್, ಸ್ಥಳೀಯ ಪರಿಸರದಲ್ಲಿ ಜನಾನುರಾಗಿಯಾಗಿದ್ದರು. ಕೋಳಿ ಉದ್ಯಮ ನಡೆಸಿಕೊಂಡಿದ್ದ ಇವರು ಮಂಗಳವಾರ ರಾತ್ರಿ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳ ಮಚ್ಚಿನೇಟಿಗೆ ಬಲಿಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!