ಹೊಸದಿಗಂತ ವರದಿ ಬಳ್ಳಾರಿ:
ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ, ಸತೀಶ್ ರೆಡ್ಡಿ ಅವರ ಇಬ್ಬರು ಗನ್ ಮ್ಯಾನ್ ಗಳನ್ನು ಶುಕ್ರವಾರ ವಶಕ್ಕೆ ಪಡೆದು ಸ್ಥಳ ಮಹಜರು ಮಾಡಿದರು.
ಘಟನೆಗೆ ಸಂಬಂಧಿಸಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ನೇತೃತ್ವದ ತಂಡ ಬೆಳ್ಳಂ ಬೆಳಿಗ್ಗೆ ಗನ್ ಮ್ಯಾನ್ ಗಳನ್ನು ವಶಕ್ಕೆ ಪಡೆದು, ನಗರದ ಅವಂಬಾವಿ ಪ್ರದೇಶದ ಗಂಗಾವತಿ ಶಾಸಕ ಗಾಲಿ ಜನಾರ್ಧನ್ ರೆಡ್ಡಿ ನಿವಾಸದ ಬಳಿ ಕರೆದೊಯ್ದು ಸ್ಥಳ ಮಹಜರು ಮಾಡಿದರು. ಈ ವೇಳೆ ಪೋಲೀಸ್ ಅಧಿಕಾರಿಗಳು ಇತರರಿದ್ದರು.


