Thursday, January 8, 2026

ಬಳ್ಳಾರಿ ಬ್ಯಾನರ್ ಗಲಾಟೆ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ವರದಿ ಬಳ್ಳಾರಿ:

ಬ್ಯಾನರ್ ಗಲಾಟೆ ಪ್ರಕರಣ, ಗುಂಡಿನ ದಾಳಿಯಲ್ಲಿ ಕೈ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ಮಧ್ಯೆ ನಡೆದ ಘರ್ಷಣೆ, ಗುಂಡಿನ ದಾಳಿ, ಕೈ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಘಟನೆಯಲ್ಲಿ ಮೃತಪಟ್ಟಿರುವ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಪೋಲೀಸ್ ಇಲಾಖೆ ಅಧಿಕಾರಿಗಳಿಂದ ಪೂರಕ ಮಾಹಿತಿ ಪಡೆದರು.

ಇದನ್ನೂ ಓದಿ: Kitchen tips | ಈ ರೀತಿ ಸ್ಟೋರ್ ಮಾಡಿದ್ರೆ ಹಸಿಮೆಣಸಿನಕಾಯಿ ತಿಂಗಳು ಗಟ್ಟಲೆ ಫ್ರೆಶ್ ಆಗಿರುತ್ತೆ

ಯಾವುದೇ ಕಾರಣಕ್ಕೂ ಬಳ್ಳಾರಿಯಲ್ಲಿ ಶಾಂತಿಗೆ ಭಂಗ ಆಗಬಾರದು, ನಿರ್ಲಕ್ಷ್ಯ ವಹಿಸದೇ ಅಗತ್ಯ ಕ್ರಮಕೈಗೊಳ್ಳಬೇಕು, ನಿರ್ಲಕ್ಷ್ಯ ಬೇಡ ಎಂದು ಅಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಬಳ್ಳಾರಿ ವಲಯ ಐಜಿಪಿ ವರ್ತಿಕಾ ಕಟಿಯಾರ್, ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಜಿ.ಪಿo.ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಎಡಿಸಿ ಮಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಸೇರಿದಂತೆ ಇತರರು ಇದ್ದರು.

error: Content is protected !!