ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕ್ಯಾಂಟೀನ್ ಇಂದಿನಿಂದ ಬಂದ್ ಆಗಲಿದೆ ಎಂದು ತಿಳಿದುಬಂದಿದೆ.
ಇಂದು ಕ್ಯಾಂಟೀನ್‌ನಲ್ಲಿ ಯಾವುದೇ ವಸ್ತುಗಳು ಸಿಗಲ್ಲ. ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ದೊರೆತ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ.