ಕಾಂಗ್ರೆಸ್ ತೆಕ್ಕೆಗೆ ಬಳ್ಳಾರಿ ಮಹಾನಗರ ಪಾಲಿಕೆ, 21ವರ್ಷದ ಯುವತಿ ಪ್ರಥಮ ಪ್ರಜೆ!

ಹೊಸದಿಗಂತ ವರದಿ ಬಳ್ಳಾರಿ:

ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಬುಧವಾರ ಪಾಲಿಕೆ ಸಭಾಂಗಣದಲ್ಲಿ ನಡೆದಿದ್ದು 4ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಡಿ.ತ್ರಿವೇದಿ ಅವರು ಮೇಯರ್ ಹಾಗೂ ಉಪ ಮೇಯರ್ ಆಗಿ 33ನೇ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಜಾನಕಿ ನೇಮಕಗೊಂಡಿದ್ದಾರೆ.

ಪಾಲಿಕೆ ಇತಿಹಾಸದಲ್ಲೇ, 21ನೇ ವರ್ಷದ ಯುವತಿಯೊಬ್ಬರು ಮಹಾನಗರದ ಪ್ರಥಮ ಪ್ರಜೆಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಹೆಲ್ತ್ ಇನ್ಸ್ಪೆಕ್ಟರ್ ಅಭ್ಯಾಸ ಮಾಡಿದ ಯುವತಿ ಬಳ್ಳಾರಿ ನಗರದ ಅಭಿವೃದ್ಧಿ ಕನಸು ಹೊತ್ತು ಮೇಯರ್ ಆಗುವ ಮೂಲಕ ರಾಜ್ಯದ ಗಮನಸೆಳೆದಿದ್ದಾರೆ.

ಚುನಾವಣೆ ಅಧಿಕಾರಿಗಳಾಗಿ ಆಗಮಿಸಿದ್ದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಬಜಪೆ ಅವರು ಮೇಯರ್‌, ಉಪ ಲೇಯರ್ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಎಡಿಸಿ ಮಹ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಸೇರಿದಂತೆ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!