November 18, 2026
Wednesday, November 18, 2026
spot_img

‘ಬಿಲಾಂಗಿಂಗ್ ಎ ಜರ್ನಿ ಆಫ್ ಲವ್’ ಸುಳ್ಳಿನ ಕಂತೆ: MLC ಎನ್.ರವಿಕುಮಾರ್ ಟೀಕೆ

ಹೊಸದಿಗಂತ ವರದಿ ಕಲಬುರಗಿ:

ಸೋನಿಯಾ ಗಾಂಧಿ ಅವರ ಜೀವನಚರಿತ್ರೆ ಕುರಿತ ಬಿಲಾಂಗಿಂಗ್: ಎ ಜರ್ನಿ ಆಫ್ ಲವ್ ಪುಸ್ತಕವು ಸುಳ್ಳಿನ ಕಂತೆಯಾಗಿದೆ. ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಈ ಪುಸ್ತಕ ಬಿಡುಗಡೆ ಮಾಡಿರಬಹುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಟೀಕಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಸ್ತಕದಲ್ಲಿರುವ ಕಥೆ ಕೇಳಿ ರಾಹುಲ್ ಗಾಂಧಿ ಅವರೇ ತಲೆ ಚಚ್ಚಿಕೊಂಡಿದ್ದಾರೆ. ಸೋನಿಯಾ ಗಾಂಧಿ ಅವರ ಜೀವನಚರಿತ್ರೆ ಕುರಿತು ನಮ್ಮದೇನೂ ಅಭಿಪ್ರಾಯವಿಲ್ಲ. ಆದರೆ, ಪುಸ್ತಕದಲ್ಲಿ ಸತ್ಯಾಂಶಗಳನ್ನು ಬರೆಯಬೇಕಿತ್ತು. ಸುಳ್ಳುಗಳನ್ನು ಬರೆದು ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ:

ಇನ್ನೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಎನ್‌ಡಿಎ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದಿದ್ದೇವೆ. ಅದೇ ರೀತಿಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಶೇ.100ರಷ್ಟು ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Must Read

Skip to toolbar