ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಲ್ಟ್ ತಯಾರಿಕಾ ಘಟಕಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಪ್ಲೇಕಾನ್ ಬೆಲ್ಟ್ ತಯಾರಿಕಾ ಘಟಕದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಕಾರ್ಖಾನೆಯಲ್ಲಿದ್ದ ಉಪಕರಣಗಳೆಲ್ಲ ಸುಟ್ಟು ಕರಕಲಾಗಿದ್ದು, ಲಕ್ಷಂತಾರ ರೂಪಾಯಿ ನಷ್ಟವಾಗಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಇಡೀ ಪ್ರದೇಶದಲ್ಲಿ ವ್ಯಾಪಿಸಿದೆ. ಸ್ಥಳೀಯ ನಿವಾಸಿಗಳು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.