ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಒಡ್ಡಿದ ದುಷ್ಕರ್ಮಿಗಳು

ಹೊಸದಿಗಂತ ವರದಿ, ಮಂಗಳೂರು:
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ತಲವಾರು ಝಳಪಿಸಿ ಬೆದರಿಕೆ ಒಡ್ಡಿದ ಘಟನೆ ನಗರದ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ತಡರಾತ್ರಿ 11.30 ರ ಸುಮಾರಿಗೆ ನಡೆದಿದೆ.
ಗುರುವಾರ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಅವರು ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ಮುಗಿಸಿ ಬೆಳ್ತಂಗಡಿ ಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.
ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿದ್ದ ಹರೀಶ್ ಪೂಂಜಾ ಅವರನ್ನು ನಗರದ ಪಡೀಲ್ ನಿಂದ ಫರಂಗಿಪೇಟೆ ಯವರೆಗೆ ಕಾರೊಂದರಲ್ಲಿ ಬೆನ್ನಟ್ಟಿದ ದುಷ್ಕರ್ಮಿಗಳ ತಂಡ ಫರಂಗಿಪೇಟೆ ಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವ್ಯಾಚ್ಯವಾಗಿ ಬೈದು ತಲವಾರು ಝಳಪಿಸಿ ಪರಾರಿಯಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರ ಕಾರು ಚಾಲಕ ನವೀನ್ ದೂರು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!