ಬೆಳ್ತಂಗಡಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಮೂವರ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೆ ಛಿದ್ರವಾಗಿ ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.

ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಸುಡುಮದ್ದು ತಯಾರಿ ನಡೆಸುತ್ತಿದ್ದರು, ಸಾಲಿಡ್ ಫೈಯರ್ ವರ್ಕ್ಸ ಎಂಬ ಘಟಕದಲ್ಲಿ ಘಟನೆ ನಡೆದಿದೆ. ಅಲ್ಲಿನ ಪರಿಸ್ಥಿತಿ ಭಯಾನಕವಾಗಿದ್ದು ಸುಮಾರು 5 ಬಾರಿ ಸ್ಫೋಟ ಸಂಭವಿಸಿದೆ.

ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು.

ಈ ಪೈಕಿ ತ್ರಿಶೂರಿನ ವರ್ಗೀಸ್, ಹಾಸನ ನಾಯಕನಹಳ್ಳಿ ಚೇತನ್, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಉಳಿದಂತೆ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಕೇರಳ ಇಷ್ಟು ಮಂದಿ ಕೆಲಸ ನಿರ್ವಹಿಸುತ್ತಿದ್ದರು.

ಮೃತಪಟ್ಟ ಮೂವರು ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಶೆಡ್ ಸಂಪೂರ್ಣ ದ್ವಂಸವಾಗಿದ್ದು ಇದರ ಸದ್ದು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ವಿಜಯ ಪ್ರಸಾದ್ ಸಹಿತ ವೇಣೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಎಸ್.ಪಿ. ರಿಷ್ಯಂತ್ ತಹಸೀಲ್ದಾರ್,ಡಿ.ವೈ ಎಸ್ ಪಿ,ಶಾಸಕ ಹರೀಶ್ ಪೂಂಜ, ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ, ಸರ್ಕಲ್ ಇನ್ ಸ್ಪೆಕ್ಟರ್ ನಾಗೇಶ್ ಕದ್ರಿ, ಸ್ಥಳಕ್ಕೆ  ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!