June 23, 2026
Tuesday, June 23, 2026
spot_img

ಬೆಳ್ತಂಗಡಿ | ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಲ್ಮಂಜ ಗ್ರಾಮದ ಪಜಿರಡ್ಕ ಕೆಳಭಾಗದಲ್ಲಿ ನೇತ್ರಾವತಿ ನದಿಗೆ ಇಳಿದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಉಜಿರೆಯ ಇಂಜಿನಿಯರಿಂಗ್ ಕಾಲೇಜೊಂದರ ಎಂಟು ಮಂದಿ ವಿದ್ಯಾರ್ಥಿಗಳು ನೇತ್ರಾವತಿ ನದಿಯ ಕಲ್ಲಗುಂಡಿ ಎಂಬ ಸ್ಥಳದಲ್ಲಿ ನದಿ ನೀರಿಗೆ ಸ್ನಾನಕ್ಕೆ ಇಳಿದಿದ್ದರು. ಇವರ ಪೈಕಿ ಗೋಕಾಕ್ ಮೂಲದ ಇಂಜಿನಿಯರಿಂಗ್ ಕೊನೆಯ ವರ್ಷದ ವಿದ್ಯಾರ್ಥಿಶ್ರೀಪೂರ್ಣ (22) ಎಂಬಾತ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.

ಯಾರಿಗೂ ಈಜಲು ತಿಳಿದಿಲ್ಲ

ಇವರಲ್ಲಿ ಯಾರಿಗೂ ಈಜು ಬರದಿದ್ದು, ಘಟನೆ ನಡೆಯುತ್ತಿದ್ದಂತೆ ಉಳಿದ ವಿದ್ಯಾರ್ಥಿಗಳು ಬೊಬ್ಬೆ ಹಾಕಿದ್ದು, ಕೂಡಲೇ ಸ್ಥಳೀಯರು ಆಗಮಿಸಿ ಹುಡುಕಾಟ ನಡೆಸಿದ್ದಾರೆ. ಬಳಿಕ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಆಗಮಿಸಿ ಹುಡುಕಾಟ ನಡೆಸಿದರು, ಯುವಕನ ಪತ್ತೆಯಾಗಿಲ್ಲ.

ಘಟನಾ ಸ್ಥಳದಲ್ಲಿ ಭಾರಿ ಸಂಖ್ಯೆಯ ಜನರು ಜಮಾಯಿಸಿದ್ದರು. ಅಗ್ನಿಶಾಮಕ ದಳವೂ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !