ಬೆಮಳಖೇಡಾ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರತಿ ಕುಟುಂಬಕ್ಕೆ 5 ಲಕ್ಷ ಪರಿಹಾರ: ಕೇಂದ್ರ ಸಚಿವ ಖೂಬಾ

ಹೊಸ ದಿಗಂತ ವರದಿ, ಬೀದರ್:

ಬೆಮಳಖೇಡಾ ರಸ್ತೆ ಅಪಘಾತದ ಕುರಿತು ನಾನು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಅವರು ಮೃತ ಪ್ರತಿ ಕುಟುಂಬಕ್ಕೆ 5ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ ಎಂದು ಕೇಂದ್ರ ನವಿಕರಿಸಬಹುದಾದ ಇಂಧನ ಮೂಲ ಮತ್ತು ರಸಾಯನಿಕ ಹಾಗೂ ರಸಗೊಬ್ಬರ ರಾಜ್ಯ ಖಾತೆ ಸಚಿವರಾದ ಭಗವಂತ ಖೂಬಾ ಹೇಳಿದರು.

ಅವರು ಇಂದು ಬ್ರೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಮಳಖೇಡಾ ರಸ್ತೆ ಅಪಘಾತದಲ್ಲಿ ಗಾಯಗೊಂಡ ರೋಗಿಗಳ ಆರೋಗ್ಯ ವಿಚಾರಿಸಿದ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿದರು. ಗಾಯಗೊಂಡ ರೋಗಿಗಳಿಗೆ ಸಂಪೂರ್ಣ ಆಸ್ಪತ್ರೆಯ ವೆಚ್ಚ ಸರ್ಕಾರದಿಂದ ಭರಿಸಲಾಗುವುದು. ಮತ್ತು ಸಾವನಪ್ಪಿದ ಹಾಗೂ ಗಾಯಗೊಂಡ ಕುಟುಂಬಗಳ ಜೊತೆ ನಮ್ಮ ಸರ್ಕಾರ ಇರಲಿದೆ. ರೋಗಿಗಳು ಯಾವುದೇ ಕಾರಣಕ್ಕೆ ಅತಂಕಪಡಬಾರದು. ಎಲ್ಲಾ ರೋಗಿಗಳು ಅದಷ್ಟು ಬೇಗನೇ ಗುಣಮುಖರಾಗಲಿ, ರೋಗಿಗಳಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಬೇಕೆಂದು ಅವರು ವೈದ್ಯರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ರತಿಕಾಂತ ಸ್ವಾಮಿ, ಬ್ರಿಮ್ಸ್ ನೀರ್ದೇಶಕ ಶಿವಕುಮಾರ ಶೆಟಕಾರ, ಹೆಚ್ಚುವರಿ ಪೋಲಿಸ್ ಅಧಿಕ್ಷಕರಾದ ಮಹೇಶ ಮೇಘಣ್ಣವರ ಸೇರಿದಂತೆ ಬ್ರಿಮ್ಸ್ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!