RECRUITMENT | ಬಿಇಎಂಎಲ್‌ ನಲ್ಲಿ 68 ಹುದ್ದೆಗಳ ನೇಮಕಾತಿ, ಮೇ 1ರೊಳಗೆ ಅರ್ಜಿ ಹಾಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ ನಲ್ಲಿ 68 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಎಂ.ಎ, ಸಿಎ/ಐಸಿಡಬ್ಲ್ಯೂಎ, ಎಂ.ಟೆಕ್‌, ಎಲ್‌ಎಲ್‌ಬಿ, ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಕನಿಷ್ಟ 29 ರಿಂದ ಗರಿಷ್ಟ 52 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,900/- ರಿಂದ 24,00,00/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 1,2023ರೊಳಗೆ ಅರ್ಜಿಯನ್ನು ಹಾಕಬಹುದು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!