BENEFITS | ಡ್ರ್ಯಾಗನ್ ಫ್ರೂಟ್ ಆರೋಗ್ಯಕ್ಕೆ ಎಷ್ಟು ಉತ್ತಮ? ಇದರ ಪ್ರಯೋಜನ ಏನು?

ಡ್ರ್ಯಾಗನ್ ಫ್ರೂಟ್ ಅನೇಕ ರೋಗಗಳಿಗೆ ರಾಮಬಾಣವಾಗಿದೆ ಮತ್ತು ಹಲವಾರು ಉಪಯೋಗಗಳನ್ನು ಹೊಂದಿದೆ. ಇದು ಫೈಬರ್, ಪ್ರೋಟೀನ್ಗಳು, ವಿಟಮಿನ್ ಸಿ, ಕಾರ್ಟಿನ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಒಮೆಗಾ -3, ಒಮೆಗಾ -6 ಪ್ರೊಟೊನ್ಯೂಟ್ರಿಯೆಂಟ್ಗಳು ಸಮೃದ್ಧವಾಗಿದೆ. ಇದರಲ್ಲಿ ಕ್ಯಾಲೋರಿಯೂ ಕಡಿಮೆ.

ಇದು ಕಡಿಮೆ ಕೊಬ್ಬಿನಂಶವನ್ನು ಹೊಂದಿರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಡ್ರ್ಯಾಗನ್ ಫ್ರೂಟ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಒಮೆಗಾ-3 ಆ್ಯಂಟಿ ಆಸಿಡ್‌ಗಳನ್ನು ಹೊಂದಿರುವುದರಿಂದ ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ.

ಡ್ರ್ಯಾಗನ್ ಫ್ರೂಟ್ ಹೆಚ್ಚಿನ ಫೈಬರ್ ಅಂಶವಿರುವುದರಿಂದ, ಇದು ದೇಹದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ.

ಈ ಡ್ರ್ಯಾಗನ್ ಫ್ರೂಟ್ ವಿಟಮಿನ್ ಸಿ ಅಂಶವು ಚರ್ಮಕ್ಕೆ ಹೊಳಪನ್ನು ನೀಡುತ್ತದೆ. ಡ್ರ್ಯಾಗನ್ ಫ್ರೂಟ್ ವಿಟಮಿನ್ ಸಿ ಮತ್ತು ವಿಟಮಿನ್ ಎ ಯಲ್ಲಿ ಸಮೃದ್ಧವಾಗಿದೆ, ಇದು ನಿಮ್ಮ ಮೆದುಳನ್ನು ಚುರುಕಾಗಿರಿಸುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!