spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಶ್ಚಿಮ ಬಂಗಾಳ| 130 ಮಕ್ಕಳಿಗೆ ತೀವ್ರ ಜ್ವರ, ಭೇದಿ: ಆಸ್ಪತ್ರೆಗೆ ದಾಖಲು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ತೀವ್ರ ಜ್ವರ ಮತ್ತು ಭೇದಿಯಿಂದ 130 ಮಕ್ಕಳು ಅಸ್ವಸ್ತಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜಲ್ಪೈಗುರಿ ಸದರ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದರು.

ನಾವು ಈ ಪರಿಸ್ಥಿತಿಯ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ ಮತ್ತು ಯಾರಿಗೂ ಪ್ರವೇಶ ನಿರಾಕರಿಸದಂತೆ ಆಸ್ಪತ್ರೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಕೋವಿಡ್ 19 ಮೂರನೇ ಅಲೆ ಮಕ್ಕಳ ಮೇಲೆಯೇ ಹೆಚ್ಚಿನ ಪರಿಣಾಮ ಬೀರಲಿದೆ ಎಂಬ ತಜ್ಞರು ಎಚ್ಚರಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಗತ್ಯವಿದ್ದರೆ ಮಕ್ಕಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುವುದು ಎಂದು  ಅಧಿಕಾರಿ ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss