ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಬಂಗಾಳ ಸಿಎಂ ಬ್ಯಾನರ್ಜಿ ಭೇಟಿಯಾದ ಹೆಚ್​.ಡಿ. ಕುಮಾರಸ್ವಾಮಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಕರ್ನಾಟಕ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಅವರು ಇಂದು ಭೇಟಿಯಾದರು.

ಟಿಎಂಸಿ ಮೂಲಗಳ ಪ್ರಕಾರ, ಇಬ್ಬರೂ ನಾಯಕರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢಿ ಬಿಜೆಪಿಯನ್ನು ಎದುರಿಸುವ ತಂತ್ರಗಳ ಬಗ್ಗೆ ಚರ್ಚಿಸಲಾಗಿದೆ.
ಕಾಂಗ್ರೆಸ್​​ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳಲ್ಲಿ ಒಮ್ಮತ ರೂಪಿಸುವ ಸಲುವಾಗಿ ಸಭೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಳೆದ ವಾರವಷ್ಟೇ ಮಮತಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಹಾಗೂ ಕುಮಾರಸ್ವಾಮಿ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಚುನಾವಣಾ ಪ್ರಚಾರದ ಭರಾಟೆಯ ನಡುವೆಯೂ ಬಿಡುವು ಮಾಡಿಕೊಂಡು ಕುಮಾರಸ್ವಾಮಿ ಪಶ್ಚಿಮ ಬಂಗಾಳಕ್ಕೆ ತೆರಳಿ ಮಮತಾ ಬ್ಯಾನರ್ಜಿ ಜತೆ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!