ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹತ್ಯೆಗೆ ಕರೆ ನೀಡಿ ಪೋಸ್ಟ್‌: ವಿದ್ಯಾರ್ಥಿನಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗು ಕೊಲೆಯ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಮತ್ತು ಬೆದರಿಕೆ ಹಾಕಿರುವ ಪೋಸ್ಟ್‌ವೊಂದನ್ನು ಮಾಡಿದ್ದ ವಿದ್ಯಾರ್ಥಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಈಕೆ ತನ್ನ kirtisocial ಎಂಬ ತನ್ನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹತ್ಯೆಗೆ ಕರೆ ನೀಡಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಹತ್ಯೆಯನ್ನು ನೆನಪಿಸುವ ರೀತಿಯಲ್ಲಿ ಮಮತಾ ಬ್ಯಾನರ್ಜಿಯನ್ನು ಹತ್ಯೆ ಮಾಡಿ ಎಂದು ಪೋಸ್ಟ್‌ ಮಾಡಿದ್ದಾಳೆ ಎನ್ನಲಾಗಿದೆ.

ಕೀರ್ತಿ ಶರ್ಮಾ ವಿರುದ್ಧ ತಾಲ್ತಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಅರೆಸ್ಟ್‌ ಮಾಡಲಾಗಿದೆ.

ಕೀರ್ತಿ ಒಟ್ಟು ಮೂರು ಪೋಸ್ಟ್‌ಗಳನ್ನು ಮಾಡಿದ್ದು, ಒಂದು ಪೋಸ್ಟ್‌ನಲ್ಲಿ ಮೃತ ವೈದ್ಯೆಯ ಗುರುತು ಬಹಿರಂಗ ಪಡಿಸಿದ್ದಾರೆ. ಮತ್ತೆರಡು ಪೋಸ್ಟ್‌ನಲ್ಲಿ ಮಮತಾ ಬ್ಯಾನರ್ಜಿಯವರಿಗೆ ಬೆದರಿಕೆವೊಡ್ಡಿದ್ದಾರೆ ಎಂದು ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here