ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Sheikh Hasina) ಅವರಿಗೆ ವಿಶೇಷ ಉಡುಗಡೆಯನ್ನು ಕಳುಹಿಸಿಕೊಟ್ಟಿದ್ದಾರೆ.
ಅದೇನೆಂದರೆ 600 ಕೆಜಿ ʻಹಿಂಸಾಗರ್ʼ ಹಾಗೂ ʻಲಂಗ್ರಾʼ ತಳಿಯ ಮಾವಿನ ಹಣ್ಣು.
ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೂ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು.ಈ ಬಾರಿಯೂ ರಾಜತಾಂತ್ರಿಕ ಪ್ರಯತ್ನಗಳ ಭಾಗವಾಗಿ ಬಾಂಗ್ಲಾದೇಶದ ಪ್ರಧಾನಿ , ಮಮತಾ ಬ್ಯಾನರ್ಜಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ.