Sunday, August 14, 2022

Latest Posts

ಬಂಗಾಳ ಉಪಚುನಾವಣೆ| ಭವಾನಿಪುರ ಕ್ಷೇತ್ರದಿಂದ ಮಮತಾ ಭ್ಯಾನರ್ಜಿ ಸ್ಪರ್ಧೆ, ಇಂದು ನಾಮಪತ್ರ ಸಲ್ಲಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಂಗಾಳದ ಭವಾನಿಪುರದ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಸುವೇಂದು ಅಧಿಕಾರಿ ವಿರುದ್ಧ ಸೋಲೊಪ್ಪಿಕೊಂಡರು. ಮಮತಾ ಬ್ಯಾನರ್ಜಿ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದು, ಈಗ ಅವರು ಬಂಗಾಳ ಸಿಎಂ ಆಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.
ರಾಜ್ಯಸಭೆಯಲ್ಲಿ ಖಾಲಿ ಇರುವ 6 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಪಶ್ಚಿಮ ಬಂಗಾಳದ ಒಂದು, ಅಸ್ಸಾಂ, ಮಧ್ಯಪ್ರದೇಶ, ಪುದುಚೇರಿ ಮತ್ತು ಮಹಾರಾಷ್ಟ್ರಗಳ ತಲಾ ಒಂದು ಸೀಟ್​ಗಾಗಿ ಎಲೆಕ್ಷನ್ ನಡೆಯಲಿದೆ.  ಬಂಗಾಳದಲ್ಲಿ ಸೆಪ್ಟೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಅ.3ರಂದು ಮತ ಎಣಿಕೆ ನಡೆಯಲಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss