September 24, 2026
Thursday, September 24, 2026
spot_img

ಬಂಗಾಳ ಸಿಎಂ ಸುವೇಂದು ಅಧಿಕಾರಿ ಪಿಎ ಹತ್ಯೆ ಕೇಸ್: ಸಿಬಿಐಯಿಂದ ಪ್ರಮುಖ ಶೂಟರ್ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಎಂಬಾತನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಕೊಲೆ ನಡೆದ 12 ದಿನಗಳ ಬಳಿಕ ಪ್ರಮುಖ ಆರೋಪಿ ಸೆರೆ ಸಿಕ್ಕಿದ್ದು, ಈತ ಪ್ರಕರಣದಲ್ಲಿ ಗುಂಡು ಹಾರಿಸಿದ ಪ್ರಮುಖ ಶಾರ್ಪ್ ಶೂಟರ್‌ಗಳಲ್ಲಿ ಓರ್ವ ಎಂದು ಶಂಕಿಸಲಾಗಿದೆ.

ಯುವ್ನ್ ಪೊಲೀಸರು-ಸಿಬಿಐ ಜಂಟಿ ಕಾರ್ಯಾಚರಣೆ

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿರುವ ಛಾಪರ್ ಟೋಲ್ ಪ್ಲಾಜಾ ಬಳಿ ಸಿಬಿಐ ಅಧಿಕಾರಿಗಳು ಮತ್ತು ಉತ್ತರ ಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದರೆ.

ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಇದುವರೆಗೂ ರಾಜ್ ಸಿಂಗ್, ಮಯಾಂಕ್ ರಾಜ್ ಮಿಶ್ರಾ ಮತ್ತು ವಿಕ್ಕಿ ಮೌರ್ಯ ಎಂಬ ಮೂವರನ್ನು ಬಂಧಿಸಲಾಗಿತ್ತು. ಇದೀಗ ಮಾಸ್ಟರ್‌ಮೈಂಡ್ ರಾಜ್‌ಕುಮಾರ್‌ ಬಂಧಿಸುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ.

ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ಬಳಿಕ ಸಿಎಂ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !