ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದು ಪಶ್ಚಿಮ ಬಂಗಾಳದಲ್ಲಿ 5ನೇ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, 45 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಇಂದು ರಾಜ್ಯದ 6 ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದ್ದು, ಉತ್ತರ 24 ಪರಾಂಗಣ, ಪುರ್ಬ ಬರ್ಧಮಾನ್, ನಾಯ್ಡ, ಡಾರ್ಜಿಲಿಂಗ್, ಜಲ್ಪಾಯ್ಗುರಿ, ಕಲಿಂ ಪೋಂಗ್ ನಲ್ಲಿ ಚುನಾವಣೆ ನಡೆಯುತ್ತಿದೆ.
ಒಟ್ಟು 319 ಮಂದಿ ಚುನಾವಣ ಕಣದಲ್ಲಿದ್ದು, ಅವರಲ್ಲಿ 39 ಮಹಿಳೆಯರು ಸ್ಪರ್ಧಿಸುತ್ತಿದ್ದಾರೆ. ಇಂದಿನ ಚುನಾವಣೆ ನಂತರ ಒಟ್ಟು 294 ಸ್ಥಾನಗಳಿಗೆ ಮತದಾನ ಪೂರ್ಣಗೊಳ್ಳಲಿದೆ.
ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ 4 ಹಂತಗಳಲ್ಲಿ 135 ಸ್ಥಾನಗಳಿಗೆ ಮತದಾನ ನಡೆದಿದೆ. ಮೇ.2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಇಂದು ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದ ಚುನಾವಣೆ ನಡೆಯುತ್ತಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುವವರು ತಮ್ಮ ಮತ ಚಲಾಯಿಸುವಂತೆ ಮನವಿ ಮಾಡಿದರು.