ಚುನಾವಣಾ ಹಿಂಸಾಚಾರ ಕುರಿತು ಅಮಿತ್ ಶಾಗೆ ವರದಿ ಸಲ್ಲಿಸಿದ ರಾಜ್ಯಪಾಲರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗೌಪ್ಯ ವರದಿ ಸಲ್ಲಿಸಿದ್ದಾರೆ. ಭಾನುವಾರ ರಾತ್ರಿ ಕೋಲ್ಕತ್ತಾದಿಂದ ದೆಹಲಿಗೆ ಆಗಮಿಸಿದ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಜುಲೈ 8 ರಂದು ಬಂಗಾಳ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಉತ್ತರ 24 ಪರಗಣಗಳು, ದಕ್ಷಿಣ 24 ಪರಗಣಗಳು ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ ಹಿಂಸಾಚಾರ ನಡೆಯಿತು.

ಹಿಂಸಾಚಾರ ನಡೆದ ಪ್ರದೇಶಗಳಿಗೆ ರಾಜ್ಯಪಾಲ ಆನಂದ ಬೋಸ್ ಭೇಟಿ ನೀಡಿ ಪರಿಶೀಲಿಸಿ, ಹಿಂಸಾಚಾರದಲ್ಲಿ ಮಡಿದವರ ಕುಟುಂಬಗಳೊಂದಿಗೆ ಮಾತನಾಡಿದರು. ಚುನಾವಣಾ ಹಿಂಸಾಚಾರದಲ್ಲಿ 18 ಮಂದಿ ಸಾವನ್ನಪ್ಪಿದ ಘಟನೆಗಳು, 697 ಮತಗಟ್ಟೆಗಳಲ್ಲಿ ಮರುಮತದಾನ ನಡೆಸುವುದು ಮತ್ತು ಬಂಗಾಳ ರಾಜ್ಯದಲ್ಲಿ ಶಾಂತಿ ಮತ್ತು ಭದ್ರತೆ ಪರಿಸ್ಥಿತಿ ಕುರಿತು ಅಮಿತ್ ಶಾ ಅವರಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಅಧ್ಯಕ್ಷ ಜಗನ್ನಾಥ್ ಚಟ್ಟೋಪಾಧ್ಯಾಯ ಅವರು ಬಂಗಾಳ ಪಂಚಾಯತ್ ಚುನಾವಣೆಯ ಸಂಪೂರ್ಣ ಮತದಾನವನ್ನು ರದ್ದುಗೊಳಿಸಬೇಕು ಮತ್ತು ಹೊಸದಾಗಿ ಮತದಾನ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಬೂತ್ ಒತ್ತುವರಿ, ಮತಪೆಟ್ಟಿಗೆ ಲೂಟಿ, ರಿಗ್ಗಿಂಗ್, ಬಿಜೆಪಿ ಚುನಾವಣಾ ಏಜೆಂಟರ ಮೇಲೆ ಹಲ್ಲೆ ನಡೆಸಿರುವ ಕುರಿತು ಬಿಜೆಪಿ ಮುಖಂಡರು ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!