ನಮ್ಮ ಅಂತಿಮ ಆದೇಶದಡಿಯಲ್ಲಿ ಬಂಗಾಳದ ಪಂಚಾಯತ್ ಚುನಾವಣೆ ಫಲಿತಾಂಶ: ಕೋಲ್ಕತ್ತಾ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಶ್ಚಿಮ ಬಂಗಾಳದ ಗ್ರಾಮೀಣ ಸ್ಥಳೀಯ ಪಂಚಾಯ್ತಿ ಚುನಾವಣೆಯಲ್ಲಿ (West Bengal Rural Poll Results) ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (Trinamool Congress – TMC)) ಭರ್ಜರಿ ಜಯ ಸಾಧಿಸಿದೆ.63,229 ಒಟ್ಟು ಸೀಟುಗಳ ಪೈಕಿ ತೃಣಮೂಲ ಕಾಂಗ್ರೆಸ್ ಒಟ್ಟು 34,901 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಎರಡನೇ ಸ್ಥಾನದಲ್ಲಿರುವ ಭಾರತೀಯ ಜನತಾ ಪಾರ್ಟಿ (BJP) 9,719 ಕ್ಷೇತ್ರಗಳು, ಎಡ ಪಕ್ಷಗಳು (Left Parties) 3,083 ಹಾಗೂ ಕಾಂಗ್ರೆಸ್ ಪಕ್ಷವು (Congress Party) 2,542 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಫಲಿತಾಂಶ ಪೂರ್ತಿ ಹೊರ ಬಿದ್ದ ಬಳಿಕ, ಅಂಕಿಸಂಖ್ಯೆಗಳಲ್ಲಿ ವ್ಯತ್ಯಾಸವಾಗಬಹುಹು.

ಇದರ ನಡುವೆ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ನೀಡಿದ್ದು, ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆ ಮತ್ತು ಅದರ ಫಲಿತಾಂಶಗಳು ನಮ್ಮ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಿದೆ.

ಮತದಾನದ ದಿನ ನಡೆದ ಹಿಂಸಾಚಾರ ಕುರಿತು ದಾಖಲಾಗಿರುವ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕಲ್ಕತ್ತಾ ಹೈಕೋರ್ಟ್, ಈ ಸಂಬಂಧ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಪಶ್ಚಿಮ ಬಂಗಾಳ ಪಂಚಾಯ್ತಿ ಚುನಾವಣೆ ಮತ್ತು ಫಲಿತಾಂಶವು ಈಗ ಕೋರ್ಟ್‌ ವಿಚಾರಣೆಯ ಹಂತದಲ್ಲಿದೆ. ಹಾಗಾಗಿ, ಚುನಾವಣೆಗಳನ್ನು ನಡೆಸುವುದು ಮತ್ತು ಫಲಿತಾಂಶವನ್ನು ಪ್ರಕಟಿಸುವುದು ಈ ರಿಟ್ ಅರ್ಜಿಯಲ್ಲಿ ಅಂಗೀಕರಿಸಬಹುದಾದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನು ಚುನಾವಣೆಯಲ್ಲಿ ಗೆದ್ದಿದ್ದಾರೆಂದು ಘೋಷಣೆ ಮಾಡಲಾಗಿರುವ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವಂತೆ ಹೈಕೋರ್ಟ್, ರಾಜ್ಯ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!