ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಶಿವಸೇನಾ ಬೆಂಬಲ ನೀಡಿದೆ. ಆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಶಿವಸೇನಾ ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ಮುಖಂಡ ಸಂಜಯ್ ರಾವುತ್ ತಿಳಿಸಿದ್ದಾರೆ.
ಶಿವಸೇನೆ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಶಿವಸೇನೆ ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸುವುದೇ ಅಥವಾ ಇಲ್ಲವೇ ಎಂಬ ಬಗ್ಗೆ ಹಲವರಿಗೆ ಕುತೂಹಲವಿತ್ತು. ಆದರೆ ಈ ಬಗ್ಗೆ ಪಕ್ಷದ ಮುಖಂಡ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಅಲ್ಲಿನ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.
ಜತೆಗೆ ಈ ಸಲ ‘ದೀದಿ ವರ್ಸಸ್ ಆಲ್ ಫೈಟ್’ ಎಂದಿರುವ ಸಂಜಯ್ ರಾವುತ್, ಮುಂದಿನ ಚುನಾವಣೆಯಲ್ಲಿ ಮಮತಾ ಗೆಲುವು ಸಾಧಿಸುವಂತೆ ನಾವು ಪ್ರಾರ್ಥಿಸುತ್ತೇವೆ ಎಂದಿದ್ದಾರೆ.