August 24, 2026
Monday, August 24, 2026
spot_img

ಇದು ಅನ್ಯಾಯದ ಗೆಲುವು: ಸೋಲಿನ ಸುಳಿಯಲ್ಲಿದ್ರೂ ಆರೋಪ ಮಾಡೋದು ನಿಲ್ಲಿಸದ ದೀದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆದ್ದಿರುವ ಹಲವು ಸ್ಥಾನಗಳು ನ್ಯಾಯಸಮ್ಮತವಲ್ಲ ಎಂದು ಆರೋಪಿಸಿರುವ ಅವರು, ಚುನಾವಣಾ ಪ್ರಕ್ರಿಯೆಯ ಮೇಲೆಯೇ ಪ್ರಶ್ನೆ ಎತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ 100ಕ್ಕೂ ಹೆಚ್ಚು ಕ್ಷೇತ್ರಗಳನ್ನು ಅಕ್ರಮವಾಗಿ ತನ್ನದಾಗಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಲಿಲ್ಲ ಎಂದು ದೂರಿದ ಅವರು, ಕೇಂದ್ರ ಸರ್ಕಾರದ ಪ್ರಭಾವದಲ್ಲಿ ಸಂಪೂರ್ಣ ಚುನಾವಣಾ ಪ್ರಕ್ರಿಯೆ ನಡೆದಂತಾಗಿದೆ ಎಂದು ಟೀಕಿಸಿದರು. ಈ ಬೆಳವಣಿಗೆ ಜನಾದೇಶದ ಗೆಲುವಲ್ಲ, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಫಲಿತಾಂಶ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಇದೇ ವೇಳೆ ಬಿಜೆಪಿ ಕೂಡ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಅನೇಕ ಚುನಾವಣಾ ಸೋಲುಗಳನ್ನು ಕಂಡಿದ್ದು, ಇದೀಗ ‘ಶತಕದತ್ತ ಸಾಗುತ್ತಿದೆ’ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದೆ. ‘99 ಸೋಲುಗಳು ಕೇವಲ ಅಂಕಿಯಲ್ಲ, ಅದು ನಿರಂತರ ವೈಫಲ್ಯದ ಸರಣಿ’ ಎಂದು ಬಿಜೆಪಿ ಕುಟುಕಿದೆ.

ಒಟ್ಟಾರೆ, ಪಂಚರಾಜ್ಯ ಚುನಾವಣಾ ಫಲಿತಾಂಶ ರಾಜಕೀಯ ಕದನಕ್ಕೆ ಹೊಸ ತಿರುವು ನೀಡಿದ್ದು, ಮುಂದಿನ ದಿನಗಳಲ್ಲಿ ಆರೋಪ-ಪ್ರತ್ಯಾರೋಪಗಳ ಸಮರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !