ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಬಾಗಲಕೋಟೆ:
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಖಂಡಿಸಿ ಇಂದು ಬಾಗಲಕೋಟ ನಗರದ ಭಾಜಪ ಕಾರ್ಯಾಲಯದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ ಟಿಎಂಸಿ ಕಾರ್ಯಕರ್ತರ ಗುಂಡಾ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು, ಅಲ್ಲಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾದಾಗ ಸ್ವತಹ ಕಂಡಂತಹ ಟಿಎಂಸಿ ಕಾರ್ಯಕರ್ತರ ಗೂಂಡಾ ವರ್ತನೆ ಯನ್ನು ಎಳೆ ಎಳೆಯಾಗಿ ತಿಳಿಸಿದರು. ನಂತರ ಅಧ್ಯಕ್ಷರಾದ ಶಾಂತನಗೌಡ ಪಾಟೀಲರು ಮಾತನಾಡಿ ಪಶ್ಚಿಮ ಬಂಗಾಳದ ಘಟನೆಯನ್ನು ಖಂಡಿಸಿ ಇಡೀ ದೇಶದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಪಶ್ಚಿಮ ಬಂಗಾಳದ ಕಾರ್ಯಕರ್ತರು ಹಾಗೂ ಜನತೆಯೊಂದಿಗೆ ಇದ್ದಾರೆ ಧೃತಿಗೆಡುವುದು ಬೇಡ ಎಂದು ತಿಳಿಸಿದರು. ಇದೇ ಸಮಯದಲ್ಲಿ ಇತ್ತೀಚಿಗೆ ಬಂಗಾಳದಲ್ಲಿ ಹುತಾತ್ಮರಾದ ಭಾಜಪದ ಒಂಭತ್ತು ಕಾರ್ಯಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಪ್ರತಿಭಟನೆಯಲ್ಲಿ ವಿಭಾಗದ ಸಹ ಪ್ರಭಾರಿ ಬಸವರಾಜ್ ಯಂಕಂಚಿ, ರಾಜ್ಯ ಕಾನೂನು ಪ್ರಕೋಷ್ಠದ ಸಂಚಾಲಕ ಎಸ್ ಎಸ್ ಮಿಟ್ಟಲಕೋಡ, ಜಿಲ್ಲಾ ಕಾರ್ಯದರ್ಶಿ ರಾಜು ಮುದೇನೂರ್, ನಗರ ಮಂಡಲದ ಅಧ್ಯಕ್ಷರಾದ ಬಸವರಾಜ ಅವರಾದಿ, ನಗರಸಭೆ ಅಧ್ಯಕ್ಷರಾದ ಜ್ಯೋತಿ ಭಜಂತ್ರಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಮಲ್ಲಿಕಾರ್ಜುನ ಕಾಂಬಳೆ, ಬಿಟಿಡಿಎ ಸದಸ್ಯರಾದ ಶ್ರೀ ಶಿವಾನಂದ ಟವಳಿ, ಬುಡಾ ಸದಸ್ಯರಾದ ಜಯಂತ ಕುರಂದವಾಡ, ಈರಪ್ಪ ಐಕೂರ್, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಹಾಗೂ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.