Saturday, December 20, 2025

ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಕೇಸ್: ಮತ್ತಿಬ್ಬರು ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟಾರೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಸಿಎಂಎಸ್ ಸಂಸ್ಥೆಯ ಎಟಿಎಂ ವ್ಯಾನ್ ಮೇಲೆ ದಾಳಿ ಮಾಡಿ ಆದರೊಳಗಿದ್ದ 7.11 ಕೋಟಿ ರೂ ದರೋಡೆ ಮಾಡಿದ್ದರು.

ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ದರೋಡೆ ನಡೆದ 76 ಗಂಟೆಗಳಲ್ಲೇ ಪ್ರಕರಣದ ಪ್ರಮುಖ ಆರೋಪಿಗಳಾದ ರವಿ, ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ ಮತ್ತು ಕ್ಸೇವಿಯರ್ ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದರು.
ಇದೀಗ ಮತ್ತಿಬ್ಬರು ಆರೋಪಗಳನ್ನು ಕೂಡ ಪೊಲೀಸರು ಬಂಧಿಸಿದ್ದ ಅದರೊಂದಿಗೆ ಪ್ರಕರಣದಲ್ಲಿನ ಒಟ್ಟಾರೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!