ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್‌ಗೆ ಕರೆ ನೀಡಲಾಗಿದೆ.
ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್ ಬಂದ್‌ಗೆ ಕರೆ ನೀಡಿದ್ದು, ಎಲ್ಲರೂ ಬಂದ್‌ಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ.
ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ವರೆಗೆ ರ‍್ಯಾಲಿ ಹಮ್ಮಿಕೊಂಡಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಪಕ್ಷ ಶಾಲಾ ಕಾಲೇಜುಗಳು ಬಂದ್ ಆಗುವ ಸಾಧ್ಯತೆ ಇದೆ.
ಇನ್ನು ಐಟಿ ಕಂಪನಿಗಳು ಸ್ವಯಂ ಪ್ರೇರಿತವಾಗಿ ಕೆಲಸಕ್ಕೆ ಗೈರಾಗಿ ಬಂದ್‌ಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ.