September 29, 2026
Tuesday, September 29, 2026
spot_img

WEATHER | ನಿನ್ನೆ ಸುರಿದ ಮಳೆಗೆ ಹೈರಾಣಾದ ಬೆಂಗಳೂರು, ಇಂದು ರಾಜ್ಯದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿನ್ನೆ ತಡರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಕೂಡ ರಾಜ್ಯದಲ್ಲಿ ಜೋರು ಮಳೆ ಸುರಿಯಲಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ ಜನರು ಹೈರಾಣಾಗಿದ್ದು, ರಸ್ತೆಗಳೆಲ್ಲಾ ಕೆರೆಗಳಂತೆ ಕಾಣಿಸುತ್ತಿವೆ. ಇಂದು ಕೂಡ ಸಂಜೆ ಮಳೆಯಾದರೆ ಟ್ರಾಫಿಕ್‌ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.

Must Read