ಬೆಂಗಳೂರು ಬೆಳಗಾವಿ ವಂದೇ ಭಾರತ್ ರೈಲು ಸಂಚಾರ: ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶೀಘ್ರದಲ್ಲಿಯೇ ಬೆಂಗಳೂರು ಬೆಳಗಾವಿ ಮಧ್ಯೆ ವೆಂದೇ ಭಾರತ್ ರೈಲು ಸಂಚರಿಸಲಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ನವದೆಹಲಿಯಲ್ಲಿ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಚಿವ ಪ್ರಲ್ಹಾದ ಜೋಶಿ ಅವರ ದೆಹಲಿ ಸಂಸದೀಯ ಕಚೇರಿಯಲ್ಲಿ ಸಚಿವರು ಮತ್ತು ಮಾಜಿ ಸಿಎಂ ಸೇರಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ ಬಾಧಕಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.

ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಸಹ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿಯ ತಮ್ಮ ಲೋಕಸಭಾ ಕ್ಷೇತ್ರದ ಕಾರ್ಯಾಲಯದಲ್ಲಿ ನೈಋತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್, ಡಿಆರ್​ಎಮ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.

ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳಾಪಟ್ಟಿ ನಿಗದಿಗೊಳಿಸಿ ಎಂದು ಸಚಿವ ಪ್ರಲ್ಹಾದ ಜೋಶಿ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ರೈಲ್ವೆ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವರದಿ ಪರಿಗಣಿಸಿ ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!