ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಾಬುಸಾಪಾಳ್ಯದಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇಂದು ನಡೆದ ಅವಶೇಷ ತೆರವು ಕಾರ್ಯಾಚರಣೆ ವೇಳೆ ಮತ್ತೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಏಳುಮಲೈ ಎಂದು ಗುರ್ತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತರಾದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಪಾಳ್ಯದಲ್ಲಿ ನಡೆದಿತ್ತು. ಘಟನೆ ಬೆನ್ನಲ್ಲೇ ಅಗ್ನಿಶಾಮಕ ಮತ್ತು ತುರ್ತು ವಿಭಾಗ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪೊಲೀಸರು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.