ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿದು ಮೃತಪಟ್ಟವರ ಕುಟುಂಬಗಳ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ.
ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡಿರುವ ಪ್ರತಿಯೊಬ್ಬರಿಗೂ 50,000 ರೂ.ಗಳ ಪರಿಹಾರವನ್ನು ಘೋಷಿಸಲಾಗಿದ್ದು, ಇದನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು.
ದುರಂತದಲ್ಲಿ ಸಂತ್ರಸ್ತರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.