ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್ ಗಳಿಂದ ಗೆದ್ದು ಸಂಭ್ರಮಿಸಿದ ಬೆಂಗಳೂರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹರ್ಷಲ್ ಪಟೇಲ್ ಭರ್ಜರಿ ಬೌಲಿಂಗ್ ನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ರಾಜಸ್ಥಾನ ರಾಯಲ್ಸ್ ಎದುರು 7 ರನ್ ರೋಚಕ ಜಯ ಸಾಧಿಸಿದೆ.

ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 190 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಕೂಡಾ ಉತ್ತಮವಾಗಿರಲಿಲ್ಲ. ಸ್ಪೋಟಕ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್, ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಸೇರಿದರು.

ಆದರೆ ಎರಡನೇ ವಿಕೆಟ್‌ಗೆ ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ಯಶಸ್ವಿ ಜೈಸ್ವಾಲ್‌ ಎರಡನೇ ವಿಕೆಟ್‌ಗೆ 98 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಸಂಕಷ್ಟದಿಂದ ಪಾರು ಮಾಡಿದರು. ಆಕರ್ಷಕ ಬ್ಯಾಟಿಂಗ್ ನಡೆಸಿದ ದೇವದತ್ ಪಡಿಕ್ಕಲ್ ಕೇವಲ 34 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 52 ರನ್‌ ಬಾರಿಸಿ ಪೆವಿಲಿಯನ್ ಸೇರಿದರು.

ಇನ್ನು ಇದರ ಬೆನ್ನಲ್ಲೇ ಮತ್ತೋರ್ವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಕೂಡಾ ಪೆವಿಲಿಯನ್‌ ಹಾದಿ ಹಿಡಿದರು. ಜೈಸ್ವಾಲ್ 37 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 47 ರನ್ ಬಾರಿಸಿ ಹರ್ಷಲ್‌ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.

ಕೊನೆಯ 5 ಓವರ್‌ಗಳಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಗೆಲ್ಲಲು 69 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ನಾಯಕ ಸಂಜು ಸ್ಯಾಮ್ಸನ್‌, ಮಹತ್ವದ ಘಟ್ಟದಲ್ಲಿ ವಿಕೆಟ್ ಒಪ್ಪಿಸಿದರು. ಸಂಜು 22 ರನ್ ಬಾರಿಸಿ ಹರ್ಷಲ್‌ ಪಟೇಲ್‌ಗೆ ಎರಡನೇ ಬಲಿಯಾದರು. ಇನ್ನು ಶಿಮ್ರೊನ್ ಹೆಟ್ಮೇಯರ್ 9 ಎಸೆತಗಳನ್ನು ಎದುರಿಸಿ ಕೇವಲ 3 ರನ್‌ ಬಾರಿಸಿ ರನೌಟ್ ಆಗಿ ಪೆವಿಲಿಯನ್ ಸೇರಿದರು. ಧೃವ್ ಜುರೇಲ್ ಕೊನೆಯಲ್ಲಿ ಕೇವಲ 16 ಎಸೆತಗಳಲ್ಲಿ ಅಜೇಯ 34 ರನ್ ಗಳಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!