ಬೆಂಗಳೂರು- ಚೆನ್ನೈ ಮುಖಾಮುಖಿ: ಟಾಸ್‌ ಗೆದ್ದ ಡು ಪ್ಲೆಸಿಸ್‌ ಬೌಲಿಂಗ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಇಂದು ಮುಖಾಮುಖಿಯಾಗಲಿವೆ. ಟಾಸ್‌ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ ಬೌಲಿಂಗ್‌ ಮಾಡುವ ನಿರ್ಧಾರ ಮಾಡಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಕಳೆದ ಪಂದಲ್ಲಿ ಚೆಪಾಕ್‌ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಸೋಲು ಕಂಡಿದ್ದರೆ, ಇನ್ನೊಂದೆಡೆ ಆರ್‌ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಕಂಡ ವಿಶ್ವಾಸದಲ್ಲಿದೆ. ಆರ್‌ಸಿಬಿ, ಮಹತ್ವದ ಮುಖಾಮುಖಿಗಾಗಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಚೆನ್ನೈ ತಂಡದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಸಿಸಾಂಡ ಮಗಲ ಬದಲಿಗೆ ಶ್ರೀಲಂಕಾದ ಸ್ಪಿನ್ನರ್‌ ಮಹೇಶ್‌ ಪಥಿರಣರನ್ನು ಎಂಎಸ್‌ ಧೋನಿ ತಂಡಕ್ಕೆ ಆಯ್ಕೆ ಮಾಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿ.ಕೀ/ನಾಯಕ), ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ), ಹರ್ಷಲ್ ಪಟೇಲ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!