ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಬೆಂಗಳೂರಿನಿಂದ ಅಸ್ಸಾಂನ ಗುವಾಹಟಿ ಸಂಚರಿಸುತ್ತಿದ್ದ ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಚೌದ್ವಾರ ಪ್ರದೇಶದ ಮಂಗೂಲಿಯ ಪ್ಯಾಸೆಂಜರ್ ನಿಲ್ದಾಣದ ಬಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ.
ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಇತರ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.