May 22, 2026
Friday, May 22, 2026
spot_img

ಬೆಂಗಳೂರಿನಲ್ಲಿ ಜೋರು ಮಳೆ: ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ಹಾರಾಟ ಮಾರ್ಗ ಬದಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆ ಸುರಿದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಹಾರಾಟ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ನಿನ್ನೆ ಸುರಿದ ಮಳೆಯಿಂದಾಗಿ 4 ವಿಮಾನಗಳ ಹಾರಾಟ ವಿಳಂಬವಾಗಿದೆ. ವಿಮಾನ ನಿಲ್ದಾಣದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವಿಮಾನಗಳಿಗಾಗಿ ಕಾಯುತ್ತಾ ನಿಂತಿದ್ದರು.

ವಿಮಾನ ನಿಲ್ದಾಣದ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳಪೆ ಗೋಚರತೆಯಿಂದಾಗಿ ಸಂಜೆ 6:20ಕ್ಕೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವನ್ನು ಚೆನ್ನೈಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಜೊತೆಗೆ ಬರೇಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಮತ್ತೊಂದು ಇಂಡಿಗೋ ವಿಮಾನವನ್ನು 6:19ಕ್ಕೆ ಕೊಯಮತ್ತೂರಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !