Monday, October 2, 2023

Latest Posts

ಒಡಿಶಾ ರೈಲು ದುರಂತ: ಬೆಂಗಳೂರಿನ ಹೊಟೇಲ್ ಕಾರ್ಮಿಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಹೌರಾ ಎಕ್ಸ್‌ಪ್ರೆಸ್‌ನಲ್ಲಿದ್ದ ಕನಿಷ್ಠ 36 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ. 30 ವರ್ಷದ ಖೇರಿಯಾ ಅವರು ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಗೆ ಹಿಂದಿರುಗುತ್ತಿದ್ದಾಗ ದುರಂತದಲ್ಲಿ ಮೃತಪಟ್ಟಿದ್ದಾರೆ.

ಸಾಗರ್ ಖೇರಿಯಾ ಜೊತೆ ಇದ್ದ ಧರ್ಮನಾಥ್ ಸಿಂಗ್ (19) ಮತ್ತು ಅಮನ್ ಒನ್ರಾವ್ (24) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

23 ಬೋಗಿಗಳ ಸೂಪರ್‌ಫಾಸ್ಟ್ ರೈಲು ಹೌರಾ ಕಡೆಗೆ ಗಂಟೆಗೆ 90-100 ಕಿಮೀ ವೇಗದಲ್ಲಿ ಬರುತ್ತಿದ್ದಾಗ ಒಡಿಶಾದ ಬಹಂಗಾ ಬಜಾರ್ ರೈಲು ನಿಲ್ದಾಣದ ಬಳಿ ರಾತ್ರಿ 7 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿ ಪಕ್ಕದ ಹಳಿಯಲ್ಲಿ ಬರುತ್ತಿದ್ದ ಶಾಲಿಮಾರ್-ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್‌ನ ಕೋಚ್‌ಗಳಿಗೆ ಡಿಕ್ಕಿ ಹೊಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!