ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ದಿನಗಣನೆ, ಸಿಎಂ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಫೆ.29ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಚಾಲನೆ ನೀಡಲಿದ್ದು, ಗಣ್ಯರಾದ ಡಾ. ಜಬ್ಬಾರ್ ಪಟೇಲ್, ಶಿವರಾಜ್ ಕುಮಾರ್, ನಟಿ ಅಜಮೇರಿ ಬಂದೋನ್, ವಿಯರಾ ಲ್ಯಾಂಗರೋವಾ ಸೇರಿ ಇನ್ನಿತರರು ಭಾಗಿಯಾಗಲಿದ್ದಾರೆ.

ಮೂರು ಬಾರಿ ಗ್ರಾಮಿ ಪ್ರಶಸ್ತಿ ಗಳಿಸಿದ ರಿಕಿ ಕೇಜ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕನ್ನಡ ಚಿತ್ರರಂಗ 90 ವರ್ಷಗಳನ್ನು ಪೂರೈಸಿದ ಸಂದರ್ಭಕ್ಕಾಗಿ ಕನ್ನಡ ವಿಶೇಷ ವಿಭಾಗದಲ್ಲಿ 30 ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!