ಫೆಬ್ರವರಿ 29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 15ನೇ ಆವೃತ್ತಿಯನ್ನು ನಡೆಯಲಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು.

ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಂಘಟನಾ ಸಮಿತಿ ಸಭೆಯ ಜತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ ಎಂದರು.

ಕೋಮುವಾದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.
ದೇಶ-ವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಟಿ ಲೀಲಾವತಿ, ಭಗವಾನ್ ಮತ್ತು ಸಿ.ವಿ. ಶಿವಶಂಕರ್ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶನ ನಡೆಯಲಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಒರಾಯನ್ ಮಾಲ್ ನಲ್ಲಿರುವ ಪಿವಿಆರ್‌ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!