ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಆಜ್ಮಿಗೆ ಒಲಿದ ಜೀವಮಾನ ಸಾಧನೆ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಆಯ್ಕೆಯಾಗಿದ್ದಾರೆ.

ಈ ಕುರಿತಂತೆ ನಡವಳಿಯನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ.

ಈ ಬಗ್ಗೆ ಖುಷಿ ಹಂಚಿಕೊಂಡ ಸಿಎಂ ಸಿದ್ಧರಾಮಯ್ಯ ಅವರು, 70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂಬುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!