ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ, ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಹೊನ್ನಾವರ ಮತ್ತು ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 13.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 24.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.